ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿಂತೆ ತನಿಖೆಗೆ ನಡೆಸಲು ಹೈಕೋರ್ಟ್ ರಾಜ್ಯಪಾಲರ ಅನುಮತಿಯನ್ನು ಎತ್ತಿ ಹಿಡಿದಿತ್ತು.
ಆದರೆ, ಇದೀಗ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ, ದ್ವಿಸದಸ್ಯ ನ್ಯಾಯಪೀಠದಲ್ಲಿ ಮೇಲ್ಮನವಿ ಸಲ್ಲಿಸಲಾಗಿದ್ದು, ಇಂದು(ಗುರುವಾರ) ಹೈಕೋರ್ಟ್ ದ್ವಿಸದಸ್ಯ ನ್ಯಾಯಪೀಠ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದೆ.
ಸ್ನೇಹಮಯಿ ಕೃಷ್ಣ ಸಿಬಿಐ ತನಿಖೆ ನಡೆಸುವ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸಲಾಗಿತ್ತು. ಹಾಗೂ ಭೂ ಮಾಲೀಕ ದೇವರಾಜು ಯಾವುದೆ ಸಂಬಂಧವಿಲ್ಲದಿದ್ದರು ತನ್ನನ್ನು ಪ್ರಕರಣದಲ್ಲಿ ಎಳೆದು ತರಲಾಗಿದೆ ಎಂದು ಮೇಲ್ಮನವಿ ಸಲ್ಲಿಸಿದ್ದಾರೆ.
ಈ ಎರಡು ಮೇಲ್ಮನವಿ ಅರ್ಜಿಗಳನ್ನು ನ್ಯಾ. ಅನು ಶಿವರಾಮನ್ ಹಾಗೂ ನ್ಯಾ. ರಾಜೇಶ್ ರೈ ಅವರ ದ್ವಿಸದಸ್ಯ ಪೀಠದಲ್ಲಿ ಇಂದು ವಿಚಾರಣೆ ನಡೆಸಲಾಯಿತು.
ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹಾಜರಾಗಿದ್ದರು.
ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸಿ ನವೆಂಬರ್ ಎರಡನೇ ವಾರ ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ನವೆಂಬರ್ ಎರಡನೇ ವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.



















