ಮೈಸೂರು: ಮುಡಾ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಬಾಮೈದ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದರು.
ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರ ವಿಚಾರಣೆಯನ್ನು ಇಂದು ನಡೆಸಲಾಯಿತು. ಈ ಪ್ರಕರಣದಲ್ಲಿ ಅವರು ಮೂರನೇ ಆರೋಪಿಯಾಗಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆ ನಡೆದಿದ್ದು, ಕೆಸರೆ ಗ್ರಾಮದಲ್ಲಿರುವ 3.16 ಎಕರೆ ಜಮೀನಿನ ಕುರಿತು ಮಲ್ಲಿಕಾರ್ಜುನ ಸ್ವಾಮಿ ಅವರಿಂದ ಮಾಹಿತಿ ಪಡೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಬರೋಬ್ಬರಿ ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಮುಡಾ ಹಗರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವೂ ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಕರಣ ದೊಡ್ಡ ಮಟ್ಟಕ್ಕೆ ಸದ್ದು ಮಾಡುತ್ತಿದೆ. ಅಲ್ಲದೇ, ಈ ಆರೋಪ ಬಿಜೆಪಿ ಹಾಗೂ ಕಾಂಗ್ರೆಸ್ ಮದ್ಯೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗುತ್ತಿದೆ.