ಮೈಸೂರು : ಮುಡಾದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕ ಎಸ್.ಎ. ರಾಮದಾಸ್ ಹಾಗೂ ಎಲ್. ನಾಗೇಂದ್ರ ವಿಚಾರಣೆ ಎದುರಿಸಿದ್ದಾರೆ.
ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ರಾಮದಾಸ್ ಅವರಿಂದ ಪೊಲೀಸರು ಕೆಲವು ಮಾಹಿತಿ ಪಡೆದಿದ್ದಾರೆ. ಆದರೆ, ರಾಮದಾಸ್ ಮಾತ್ರ ಯಾವುದೇ ಪ್ರಕ್ರಿಯೆ ನೀಡಿಲ್ಲ. ನಂತರ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ಎಲ್. ನಾಗೇಂದ್ರ ಅವರು ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದರು. ಅವರಿಂದಲೂ ಮಾಹಿತಿ ಸಂಗ್ರಹಿಸಲಾಗಿದೆ.
ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಅಂದು ಬದಲಿ ನಿವೇಶನ ನೀಡಿದ್ದಾಗ ಮುಡಾ ಕಮಿಟಿಯ ಸದಸ್ಯರಾಗಿದ್ದ ಅಂದಿನ ಸದಸ್ಯರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಹೀಗಾಗಿ ಮಾಜಿ ಶಾಸಕರು ವಿಚಾರಣೆಗೆ ಹಾಜರಾಗಿದ್ದರು ಎಂದು ತಿಳಿದು ಬಂದಿದೆ.