ಬೆಂಗಳೂರು: ಲೇಡಿ ರೌಡಿಶೀಟರ್‌ಗೆ ಅಸಭ್ಯ ಸಂದೇಶಗಳು ಹಾಗೂ ಕಿರುಕುಳ ನೀಡಿದ ಆರೋಪದಲ್ಲಿ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ರೌಡಿಶೀಟರ್ ಯಶಸ್ವಿನಿ ದೂರು ನೀಡಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಇನ್ಸ್‌ಪೆಕ್ಟರ್ ಪಾಪಣ್ಣ ತಮಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ಸಲ್ಲಿಸಿದ್ದಾಳೆ. ಮುದ್ದು, ಬಂಗಾರು, “ಕಿಸ್ ಮಿ”, “ಹಗ್ ಮಿ” ಎಂದು ಅಸಭ್ಯ ಹಾಗೂ ವೈಯಕ್ತಿಕ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ಯಶಸ್ವಿನಿ ಆರೋಪಿಸಿದ್ದಾಳೆ. ಜೊತೆಗೆ ಮನೆಗೆ ಬರುತ್ತೇನೆ ಎಂದು ಹೇಳುವುದು, ಪ್ರತಿಕ್ರಿಯೆ ನೀಡದಿದ್ದರೆ ಒತ್ತಡ ಹೇರುವುದು ಸೇರಿದಂತೆ ಹಲವು ರೀತಿಯಲ್ಲಿ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇನ್ನೂ, “ನನ್ನ ಪತ್ನಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿ, ನನಗೆ ಯಾರೂ ಏನೂ ಮಾಡಲು ಸಾಧ್ಯವಿಲ್ಲ” ಎಂದು ಇನ್ಸ್‌ಪೆಕ್ಟರ್ ಅವಾಜ್ ಹಾಕಿದ್ದಾರೆಯೆಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ವಾಟ್ಸ್ಆಪ್ ಚಾಟ್‌ಗಳು ಹಾಗೂ ಆಡಿಯೋ ದಾಖಲೆಗಳನ್ನೂ ಸಾಕ್ಷಿಯಾಗಿ ಸಲ್ಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುವ ಸಾಧ್ಯತೆ ಇದೆ.
ಇದನ್ನೂ ಓದಿ : ಇವ್ರು ಕಾಲೇಜು ವಿದ್ಯಾರ್ಥಿಗಳಾ, ರೌಡಿಗಳಾ? ಬೆಂಗಳೂರು ಯೂನಿವರ್ಸಿಟಿಯಲ್ಲಿ ನಿಲ್ಲದ ರೌಡಿಸಂ



















