ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಬಂದ್ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದು, ಆಪರೇಷನ್ ಕಾಡಾನೆ ಕಾರ್ಯಾಚರಣೆಯನ್ನು ವಿರೋಧಿಸಿ ಈ ಬಂದ್ ಆಚರಿಸಲಾಗುತ್ತಿದೆ. ತತ್ಕೋಳ ಅರಣ್ಯದ ಮೂಲಕ ಕಾಡಾನೆ ಸ್ಥಳಾಂತರ ಮಾಡುತ್ತಿರುವುದಕ್ಕೆ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಇಂದು ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಬಂದ್ ನಡೆಯಲಿದ್ದು, ಬಂದ್ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಟೋ ಚಾಲಕರು ಹಾಗೂ ಟ್ಯಾಕ್ಸಿ ಚಾಲಕರು ಕೂಡ ಬಂದ್ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ.


















