ಸಿಲಿಕಾನ್ ಸಿಟಿಯಲ್ಲಿ ಮತ್ತೆ ಒತ್ತುವರಿ ತೆರವಿಗೆ ಮತ್ತೆ ಮುಹೂರ್ತ ಫಿಕ್ಸ್ ಆಗಿದ್ದು, ಘರ್ಜಿಸಲು ಜೆಸಿಬಿ ಸಿದ್ಧವಾಗುತ್ತಿವೆ.
ಹೊಸ ರಸ್ತೆ ಹೆಸರಿನಲ್ಲಿ ರಾಜಕಾಲುವೆ ಒತ್ತುವರಿ ಮಾಡಿದ ಕಟ್ಟಡಗಳಿಗೆ ಬಿಬಿಎಂಪಿ ಶಾಕ್ ನೀಡಲು ಮುಂದಾಗಿದೆ. ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ರಾಜಕಾಲುವೆಗಳ ಒತ್ತುವರಿ ತೆರವಿಗೆ ಪಾಲಿಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. 2007ರ ನಂತರ ಕಟ್ಟಿದ ಕಟ್ಟಡಗಳ ತೆರವಿಗೆ ಬಿಬಿಎಂಪಿ ಮುಂದಾಗಿದೆ. ರಾಜಕಾಲುವೆಯ ಬಪರ್ ಜೋನ್ ನಲ್ಲಿ ಕಟ್ಟಿರುವ ಕಟ್ಟಗಳ ಮಾಲೀಕರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ.
ರಾಷ್ಟ್ರೀಯ ಹಸಿರು ನ್ಯಾಯಾಲಯದ ಅದೇಶದಂತೆ ತೆರವಿಗೆ ನಿರ್ಧರಿಸಲಾಗಿದೆ. ರಾಜಕಾಲುವೆ ಅಕ್ಕಪಕ್ಕ 300 ಕಿ.ಮೀ.ಉದ್ದದ ರಸ್ತೆ ನಿರ್ಮಾಣಕ್ಕೆ ಪ್ಲಾನ್ ಸಿದ್ಧಪಡಿಸಲಾಗಿದೆ. ಕಾಲುವೆಯ ಕೊಳಚೆ ನೀರು ರಸ್ತೆಗೆ ಬಾರದಂತೆ ಹೊಸ ರಸ್ತೆ ನಿರ್ಮಿಸಲು ಬಿಬಿಎಂಪಿ ನಿರ್ಧರಿಸಿದೆ. ಹೀಗಾಗಿಯೇ ಈ ಕಾರ್ಯಾಚರಣೆಗೆ ನಿರ್ಧರಿಸಲಾಗಿದೆ.