ಬೆಂಗಳೂರು: ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ (Karnataka Legislative session) ನಡೆಯಲಿದ್ದು, ಮಾರ್ಚ್ 7ರಂದು ಬಜೆಟ್ (Karnataka Budget) ಮಂಡನೆಯಾಗಲಿದೆ.
ಅಧಿವೇಶನದಲ್ಲಿ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ. ಈ ಕುರಿತು ಸಿದ್ದರಾಮಯ್ಯ (Siddaramaiah) ಮಾಹಿತಿ ನೀಡಿದ್ದಾರೆ.ಬಜೆಟ್ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಇಲಾಖೆಗಳೊಂದಿಗೆ ಈಗಾಗಲೆ ಪೂರ್ವಭಾವಿ ಸಭೆ ನಡೆಸಿದ್ದಾರೆ. ಈಗಾಗಲೇ ಇಲಾಖೆಗಳಿಂದ ಮಾಹಿತಿ ಕೂಡ ಪಡೆದುಕೊಂಡಿದ್ದಾರೆ. ಬಜೆಟ್ ಹಿನ್ನೆಲೆಯಲ್ಲಿ ಇಂದು ರೈತರು ಮತ್ತು ರೈತ ಸಂಘ-ಸಂಸ್ಥೆಗಳ ಜೊತೆ ಸಭೆ ನಡೆಸಿದರು.
“ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರುತ್ತೇನೆ. ನಮ್ಮ ಸರ್ಕಾರ ಸರ್ಕಾರ ಯಾವಾಗಲೂ ರೈತರ ಹಿತ ಕಾಪಾಡಲು ಹಿಂದೆ ಬಿದ್ದಿಲ್ಲ. ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲಿ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ ಎಂದು ಹೇಳಿದ್ದಾರೆ.