ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಮುಂಬೈ ಇಂಡಿಯನ್ಸ್ (MI) ಮಧ್ಯೆ ನಡೆಯುತ್ತಿರುವ ಪಂದ್ಯವು ರೋಚಕತೆಯಿಂದ ಕೂಡಿತ್ತು. ಕೊನೆಗೂ ಈ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ ಗೆದ್ದು ಬೀಗಿತ್ತು. ಈ ಮಧ್ಯೆ ಧೋನಿ ಕ್ರೇಜ್ ಎಲ್ಲರನ್ನೂ ಬೆರಗುಗೊಳಿಸುತ್ತಿದೆ.
ಮಹೇಂದ್ರ ಸಿಂಗ್ ಧೋನಿಯ (MS Dhoni) ಎಂಟ್ರಿ ಈಗ ಭಾರೀ ಸದ್ದು ಮಾಡುತ್ತಿದೆ. ಈ ವೇಳೆ ಸಂಕಷ್ಟಕ್ಕೆ ಸಿಲುಕಿದ್ದು ಕೇವಲ ಮುಂಬೈ ಇಂಡಿಯನ್ಸ್ ಮಾತ್ರವಲ್ಲ. ಮುಂಬೈ ಇಂಡಿಯನ್ಸ್ ತಂಡದ ಮಾಲಕಿ ನೀತಾ ಅಂಬಾನಿ ಕೂಡ. ಟಾಸ್ ಗೆದ್ದ ಸಿಎಸ್ಕೆ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್ ಗಳಿಸಿತ್ತು.
ಈ 156 ರನ್ಗಳ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.4 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 152 ರನ್ ಗಳಿಸಿತ್ತು. ಈ ಸಂದರ್ಭದಲ್ಲಿ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಗೆ ಬರುತ್ತಿದ್ದಾರೆಂಬ ಸೂಚನೆ ಸಿಗುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.
ಈ ಸದ್ದು ಗದ್ದಲದಿಂದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಓನರ್ ನೀತಾ ಅಂಬಾನಿ ಸಂಕಷ್ಟಕ್ಕೆ ಸಿಲುಕಿದರು. ಅದರಲ್ಲೂ ಧೋನಿ ಮೈದಾನಕ್ಕಿಳಿಯುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಗಾರವು ಮತ್ತಷ್ಟು ಹೆಚ್ಚಾಯಿತು. ಆಗ ನೀತಾ ಅಂಬಾನಿ ಕಿವಿ ಮುಚ್ಚಿಕೊಂಡರು. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.