ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಕೇಳಿ ಬಂದಿರುವ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿದೆ.
ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ಮುನಿರತ್ನ ಅವರು ಜಾತಿ ನಿಂದನೆ, ಜೀವ ಬೆದರಿಕೆ ಸೇರಿದಂತೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಅತ್ಯಾಚಾರ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ.
ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮುನಿರತ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರಾಗುತ್ತಿದ್ದಂತೆ ಜಡ್ಜ್ ಅನೇಕ ಪ್ರಶ್ನೆ ಕೇಳಿದ್ದರು. ವಿಚಾರಣೆ ನಂತರ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಹೀಗಾಗಿ ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.
ಮುನಿರತ್ನ ಜಡ್ಜ್ ಮುಂದೆ ಅಳಲು ತೋಡಿಕೊಂಡಿದ್ದಾರೆ. 5 ವರ್ಷಗಳ ನಂತರ ಅತ್ಯಾಚಾರ ದೂರು ಕೊಡಿಸಿದ್ದಾರೆ. ನನ್ನನ್ನ 5 ವರ್ಷಗಳ ಕಾಲ ಜೈಲಿನಲ್ಲಿ ಇಡಲು ಪ್ಲ್ಯಾನ್ ಮಾಡಿದ್ದಾರೆ. ನಾನು ಜನಪ್ರತಿನಿಧಿ. ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎನ್ನುವುದು ಗೊತ್ತಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ನನಗೆ ಅವರ ವರ್ತನೆ ಕಂಡು ಬೇಸರವಾಗಿದೆ. ಬೇಕಾದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಜಡ್ಜ್, ನೀವು ಎಲ್ಲಿ ಕೊಡಬೇಕೋ ಅಲ್ಲಿ ರಾಜೀನಾಮೆ ಕೊಡಿ ಎಂದಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಈ ಎಲ್ಲ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿದೆ.