ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡ (Pavitra Gowda) ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಅರ್ಜಿ ವಜಾಗೊಳಿಸಿ ಸಿಸಿಎಚ್ (CCH)57ನೇ ನ್ಯಾಯಾಲಯದ ನ್ಯಾಯಾಧೀಶರಾದ ಜೈ ಶಂಕರ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಇದರೊಂದಿಗೆ ಇದೇ ಪ್ರಕರಣದ ಎ 7 ಆರೋಪಿ ಅನುಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನೂ ಕೋರ್ಟ್ ವಜಾ ಮಾಡಿದೆ.
ಪವಿತ್ರಾಗೌಡ ಪರ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ನಲ್ಲಿ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನಂತರ ತೀರ್ಪು ಕಾಯ್ದಿರಿಸಿದ್ದ ಕೋರ್ಟ್ ಶನಿವಾರ ತೀರ್ಪು ನೀಡಿದೆ. ಮಹಿಳೆ ಎಂಬ ಕಾರಣಕ್ಕೆ ಜಾಮೀನು ಸಿಗುವ ಖುಷಿಯಲ್ಲಿದ್ದ ಪವಿತ್ರಾಗೆ ಇದರಿಂದ ನಿರಾಸೆಯಾಗಿದೆ.
ಸದ್ಯ ಪವಿತ್ರಾಗೌಡ ಸೇರಿದಂತೆ ಪ್ರಕರಣದ ಇನ್ನುಳಿದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ಸೆ. 9ರ ವರೆಗೂ ವಿಸ್ತರಿಸಿದೆ. ಮಂಗಳವಾರ ಎಲ್ಲ ಆರೋಪಿಗಳನ್ನು ಕೋರ್ಟ್ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಕೋರ್ಟ್ ಜಾಮೀನು ಅರ್ಜಿ ಮುಂದೂಡಿದೆ. ಪ್ರಕರಣದಲ್ಲಿ 17 ಆರೋಪಿಗಳಿದ್ದು, ಈಗಾಗಲೇ 4 ಆರೋಪಿಗಳನ್ನು ತುಮಕೂರು ಜೈಲ್ ಕಳುಹಿಸಲಾಗಿದೆ.