ಹುಬ್ಬಳ್ಳಿ: ನಗರದಲ್ಲಿನ ಪ್ರತಿಷ್ಠಿತ ಬಿವಿಬಿ ಕಾಲೇಜಿನ ಕ್ಯಾಂಪಸ್ ನಲ್ಲಿ ನಡೆದಿದ್ದ ಯುವತಿಯ ಕೊಲೆಗೆ ಸಂಬಂಧಿಸಿದಂತೆ ಹತ್ಯೆಯಾಗಿರುವ ಯುವತಿಯ ತಂದೆ ಗಂಭೀರ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿಯ (Hubballi) ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಘಟನೆಗೆ ಸಂಬಂಧಿಸಿದಂತೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರಾಜ್ಯ ಸರ್ಕಾರ, 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿತ್ತು. ಆದರೆ, ಇದುವರೆಗೂ ನೇಹಾಳ ಸಾವಿಗೆ ನ್ಯಾಯ ಸಿಕ್ಕಿಲ್ಲ. ಈಗ ನೇಹಾಳ ತಂದೆ ಗಂಭೀರ ಆರೋಪ ಮಾಡಿದ್ದಾರೆ.
ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು ಎಂದು ಮನವಿ ಮಾಡಿದ್ದಾರೆ.
2024ರ ಎಪ್ರಿಲ್ 18 ರಂದು ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾಳ ಹತ್ಯೆಯಾಗಿತ್ತು. ಪಾಲಿಕೆ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ನಿರಂಜನ ಹಿರೇಮಠ ಅವರ ಮಗಳು ನೇಹಾ. ಕೊಲೆ ಆರೋಪಿ ಫಯಾಜ್ ನನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ವಶಕ್ಕೆ ಪಡೆದಿದ್ದರು. ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿದೆ.