ರಾಯಚೂರು: ಪಟಾಕಿ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ರಾಗಿಮನಗಡ್ಡದಲ್ಲಿ ಈ ಘಟನೆ ನಡೆದಿದೆ. ನರಸಿಂಹಲು(32) ಸಾವನ್ನಪ್ಪಿರುವ ವ್ಯಕ್ತಿ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪರಸ್ಪರ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ.
ರಾಗಿಮನಗಡ್ಡದಲ್ಲಿ ಕಾರ್ನರ್ ಹತ್ತಿರ ಈ ಘಟನೆ ನಡೆದಿದೆ. ಅದೇ ಪ್ರದೇಶದಲ್ಲಿನ ಯುವಕರು, ಗುರುವಾರ ರಾತ್ರಿ ಪಟಾಕಿ ಸಿಡಿಸುತ್ತಿದ್ದರು. ಈ ವೇಳೆ ನಮ್ಮ ಮನೆಯ ಹತ್ತಿರ ಏಕೆ ಪಟಾಕಿ ಸಿಡಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆಗ ಏರಿಯಾ ಹುಡುಗರು ಮಾತು ಕೇಳದ ಹಿನ್ನೆಲೆ ನರೇಶ್, ಪ್ರವೀಣ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಆಗ ನರಸಿಂಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿಲ್ಲ. ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಉನ್ನತ ಮೂಲಗಳು ತಿಳಿಸಿವೆ. ಸದ್ಯ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.