ಬೆಂಗಳೂರು: ತಾಯಿ ಹಾಗೂ ಇಬ್ಬರು ಮಕ್ಕಳ ಕೊಲೆ ನಡೆದಿರುವ ಬೀಕರ ಘಟನೆ ನಗರದಲ್ಲಿ ನಡೆದಿದೆ.
ಈ ಘಟನೆ ಇಲ್ಲಿಯ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ. ಪತಿಯೇ ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಗಂಗರಾಜು ಕೊಲೆ ಮಾಡಿರುವ ಆರೋಪಿ. ಸ್ಥಳಕ್ಕೆ ಭೇಟಿ ನೀಡಿರುವ ಪೀಣ್ಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹೆಂಡತಿ ಭಾಗ್ಯಮ್ಮ, ಮಗಳು ಮತ್ತು ಭಾಗ್ಯಮ್ಮಳ ಅಕ್ಕನ ಮಗಳನ್ನು ಆರೋಪಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಪ್ರತಿಕ್ರಿಯಿಸಿದ್ದು, ಮೂವರು ಹೆಂಗಸರ ಕೊಲೆ ನಡೆದಿರುವುದು ಪತ್ತೆಯಾಗಿದೆ. ಮಹಿಳೆ ಭಾಗ್ಯ, ಆಕೆಯ ಮಗಳು ನವ್ಯ, ಸಂಬಂಧಿ ಹೇಮಾವತಿ ಎಂಬುವವರ ಕೊಲೆಯಾಗಿದೆ.
ಒಂದೇ ಕೋಣೆಯಲ್ಲಿ ಕೊಲೆ ಮಾಡಲಾಗಿದೆ. ಗಂಗರಾಜು ಎಂಬಾತನಿಂದ ಕೊಲೆ ನಡೆದಿದೆ.. ಹೆಬ್ಬುಗೋಡಿಯಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡುತಿದ್ದಾನೆ. ಕೊಲೆ ಮಾಡಿದ ಬಳಿಕ ವೆಪನ್ ಸಮೇತ ಆತನೇ ಠಾಣೆಗೆ ಬಂದು ಶರಣಾಗಿದ್ದಾನೆ. ಮೂಲತಃ ಇವರು ನೆಲಮಂಗಲದವರು. ಕಳೆದ ಆರು ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ