ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಸರ್ಕಾರದಲ್ಲಿ ಭಾರತ ಮೂಲದ ವಿವೇಕ್ ರಾಮಸ್ವಾಮಿ ಹಾಗೂ ಉದ್ಯಮಿ ಎಲಾನ್ ಮಸ್ಕ್ ಗೆ ಮಹತ್ವದ ಹುದ್ದೆ ನೀಡಲಾಗಿದೆ.
ಈ ಇಬ್ಬರೂ ಉದ್ಯಮಿಗಳು ಸರ್ಕಾರದ ದಕ್ಷತೆಯ ಇಲಾಖೆ(DOGE)ಯನ್ನು ಮುನ್ನಡೆಸಲಿದ್ದಾರೆ. ಈ ದೊಡ್ಡ ಹುದ್ದೆಯನ್ನು ಟ್ರಂಪ್ ಚುನಾವಣೆಗೂ ಮುನ್ನವೇ ಘೋಷಿಸಿದ್ದರು. ಅಗತ್ಯವಿರುವ ಅಧಿಕಾರಶಾಹಿ ಪ್ರವೃತ್ತಿಯನ್ನು ತೆಗೆದುಹಾಕಲು, ಅನಗತ್ಯ ನಿಯಮಗಳನ್ನು ಕಿತ್ತೊಗೆಯಲು, ವ್ಯರ್ಥ ವೆಚ್ಚಗಳನ್ನು ಕಡಿತಗೊಳಿಸುವುದಕ್ಕಾಗಿ ಹಾಗೂ ಫೆಡರಲ್ ಏಜೆನ್ಸಿಗಳನ್ನು ಪುನರ್ ರಚಿಸಲು ಈ ಇಬ್ಬರು ನೆರವಾಗಲಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.
ಅಮೆರಿಕದಲ್ಲಿ ದೊಡ್ಡ ಪ್ರಮಾಣದಲ್ಲಿ ಸುಧಾರಣೆಯನ್ನು ತರಲು ಪ್ರಮುಖ ಪಾತ್ರವಹಿಸುತ್ತಾರೆ. ಎಲಾನ್ ಮತ್ತು ವಿವೇಕ್ ಈ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದನ್ನು ನೋಡಲು ಎದುರು ನೋಡುತ್ತಿದ್ದೇನೆ ಎಂದು ಟಂಪ್ ಸಂತಸ ವ್ಯಕ್ತಪಡಿಸಿದ್ದಾರೆ.