ಮಂಡ್ಯ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಕ್ಕೆ ಮಂಡ್ಯ ಜಿಲ್ಲೆಯ ಮುಸ್ಲಿಂರು ರೊಚ್ಚಿಗೆದ್ದಿದ್ದಾರೆ.
ಉಗ್ರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ದೇಶದ ಜನರು ಮೋದಿ ಜೊತೆಗಿದ್ದೇವೆ. ಮೃತರಿಗೆ ನ್ಯಾಯ ಸಿಗಬೇಕಾದರೆ ಮುಯ್ಯಿಗೆ ಮುಯ್ಯಿ, ಸೇಡಿಗೆ ಸೇಡು ತೀರಿಸಿಕೊಳ್ಳಬೇಕು.
ಪಾಕಿಸ್ತಾನದ ಪಾಪಿಗಳಿಗೆ ಪಾಠ ಕಲಿಸಬೇಕು ಎಂದು ಮಂಡ್ಯದ ಮಳವಳ್ಳಿಯ ಮೆಹಬೂಬ್ ಪಾಷ ಎಂಬುವವರು ಪ್ರಧಾನಿಗೆ ಮನವಿ ಮಾಡಿದ್ದಾರೆ.
ಮೆಹಬೂಬ್ ಪಾಷ ನಿವೇದನೆ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.