ಮಂಡ್ಯ : ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧಿಸಿದಂತೆ ಮಂಡ್ಯದಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಮಂಡ್ಯ ಜಿಲ್ಲೆ ಗಡಿಭಾಗದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಈ ಬೆನ್ನಲ್ಲೇ ಮದ್ದೂರಿಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗಮನಕ್ಕೆ ನಿರ್ಬಂಧ ಹೇರಲಾಗಿದೆ.
ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥಿತ ಕಾರಣದಿಂದ ಮುತಾಲಿಕ್ ಮಂಡ್ಯ ಜಿಲ್ಲೆಗೆ ಆಗಮಿಸದಂತೆ ಜಿಲ್ಲಾಧಿಕಾರಿ ನಿರ್ಬಂಧ ಹೇರಿದ್ದಾರೆ. ಸದ್ಯ ಮಂಡ್ಯ ಗಡಿ ಭಾಗದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.



















