ಬೆಂಗಳೂರು: ಬೆಂಗಳೂರಿನ ಹಲಸೂರು ಬಜಾಜ್ ಸ್ಟ್ರೀಟ್ ಗೆ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿ ನೀಡಿ, ಧೈರ್ಯ ತುಂಬಿದ್ದಾರೆ.
ಇತ್ತೀಚೆಗೆ ಹಲಸೂರಿನ ಬಜಾಜ್ ಸ್ಟ್ರೀಟ್ ನ ಅಂಗಡಿಗಳು ಹಾಗೂ ಆ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಈ ಬಗ್ಗೆ ಸ್ಥಳೀಯರು ದೂರು ನೀಡಿದ್ದರು.
ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಆರೋಪಿಗಳು ಬೇಲ್ ಪಡೆದು ಹೊರಬಂದಿದ್ದರು. ಆ ನಂತರದಲ್ಲಿ ದೂರು ನೀಡಿದ ಅಂಗಡಿಯ ಮಾಲೀಕರಿಗೆ ಕಿಡಿಗೇಡಿಗಳು ವಾರ್ನಿಂಗ್ ನೀಡಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪ್ರಮೋದ್ ಮುತಾಲಿಕ್ ಧೈರ್ಯ ತುಂಬಿದ್ದಾರೆ. ಅಲ್ಲದೇ, ಪೊಲೀಸರಿಗೆ ಅಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


















