ಬೆಂಗಳೂರು : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಒಡೆತನದ ಲ್ಯಾಂಬೋರ್ಗಿನಿ ಕಾರು ಮತ್ತೊಮ್ಮೆ ಸುದ್ದಿಯಲ್ಲಿದೆ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ ಡ್ರಿಫ್ಟಿಂಗ್ ಮಾಡುವ ಮೂಲಕ, ಸೈಲೆನ್ಸರ್‌ನಿಂದ ಬೆಂಕಿ ಉಗುಳುತ್ತಾ ಕರ್ಕಶ ಶಬ್ದ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರಿನ ವಿಡಿಯೋ ಇದೀಗ ಪೊಲೀಸರ ಗಮನ ಸೆಳೆದಿದೆ. ವೈರಲ್ ವಿಡಿಯೋ ಆಧರಿಸಿ ಘಟನೆ ಯಾವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಮೊದಲು ಕಾರಿನ ವಿರುದ್ಧ ಪ್ರಕರಣ ದಾಖಲಿಸಿ, ಬಳಿಕ ತನಿಖೆ ಮುಂದುವರಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಕಾರು ಯಾವಾಗ ಚಲಾಯಿಸಲಾಗಿದೆ? ಆ ವೇಳೆ ಕಾರಿನಲ್ಲಿದ್ದವರು ಯಾರು? ವಾಹನ ಚಲಾಯಿಸಿದ್ದು ಯಾರು ಎಂಬುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.
ಈ ಕಾರು ಇದೇ ಮೊದಲ ಬಾರಿಗೆ ವಿವಾದಕ್ಕೆ ಸಿಲುಕಿಲ್ಲ. ಕಳೆದ ಮಾರ್ಚ್ 21ರಂದು ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಹಾಗೂ ಕಬ್ಬನ್ ರಸ್ತೆಯಲ್ಲಿ ಇದೇ ಲ್ಯಾಂಬೋರ್ಗಿನಿ ಕಾರಿನಿಂದ ಡ್ರಿಫ್ಟಿಂಗ್ ಮಾಡಲಾಗಿತ್ತು. ಆ ವೇಳೆ ರಿಕ್ಕಿ ರೈ ಕಾರು ಚಲಾಯಿಸುತ್ತಿದ್ದರೆಂದು ಸಿಸಿಟಿವಿ ಪರಿಶೀಲನೆಯಲ್ಲಿ ಪತ್ತೆಯಾಗಿತ್ತು.
ಇದನ್ನೂ ಓದಿ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್ ವಿದಾಯ – ಭಾವನಾತ್ಮಕ ಸಂದೇಶದೊಂದಿಗೆ ಶುಭಕೋರಿದ ಕೊಹ್ಲಿ!



















