ಇತ್ತೀಚೆಗೆ ನಟ ರಿಷಬ್ ಶೆಟ್ಟಿ ಹೇಳಿಕೆಯೊಂದು ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ಈಗ ಸ್ವತಃ ರಿಷಬ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.
ಖಾಸಗಿ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಅವರು, ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಸಿನಿಮಾಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ.
ಸಿನಿಮಾ ಆರ್ಟ್ಸ್ ಎಂದುಕೊಂಡು ಹೊರದೇಶಗಳಿಗೆ ಹೋಗಿ ಅವಾರ್ಡ್ ಗಳನ್ನು ಗೆದ್ದು ಬಂದಿದ್ದನ್ನು ನೋಡಿದ್ದೇನೆ. ನಮ್ಮ ದೇಶ ನಮ್ಮ ಹೆಮ್ಮೆ, ನನ್ನ ರಾಜ್ಯ ನನ್ನ ಹೆಮ್ಮೆ, ನನ್ನ ಭಾಷೆ ನನ್ನ ಹೆಮ್ಮೆ. ನಮ್ಮಲ್ಲಿರುವುದನ್ನು ಪಾಸಿಟಿವ್ ಆಗಿ ತೋರಿಸಬೇಕು ಎಂದು ಹೇಳಿದ್ದರು.
ಐಐಎಫ್ಎ 2024ರ ಕಾರ್ಯಕ್ರಮದಲ್ಲಿ ಭಾಗಿಯಾದಾಗ ರಿಷಬ್ ಗೆ ಈ ಕುರಿತು ಪ್ರಶ್ನೆ ಮಾಡಲಾಗಿತ್ತು. ‘ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಶೀಘ್ರವೇ ನಾನು ಈ ಕುರಿತು ಸ್ಪಷ್ಟನೆ ನೀಡುತ್ತೇನೆ ಎಂದಿದ್ದಾರೆ.
‘ಐಐಎಫ್ಎ ಅವಾರ್ಡ್ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿಗೆ ‘ಔಟ್ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಅವಾರ್ಡ್ ನೀಡಿ ಗೌರವಿಸಲಾಗಿದೆ. ಇತ್ತೀಚೆಗಷ್ಟೇ ರಿಷಬ್ ‘ಕಾಂತಾರ’ ಸಿನಿಮಾದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.