ಬೆಂಗಳೂರು: ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂಬುವುದು ನನ್ನ ಆಸೆ ಎಂದು ಸಹೋದರ ಡಿ.ಕೆ. ಸುರೇಶ್ ಹೇಳಿದ್ದಾರೆ.
ನನ್ನ ಅಣ್ಣ ಡಿ.ಕೆ.ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ. 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರುವಲ್ಲಿ ಅವರ ಪಾತ್ರ ನಿರ್ಣಾಯಕವಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಅಧಿಕಾರಕ್ಕೆ ತಂದಾಗ ಅವರು ಸಿಎಂ ಸ್ಥಾನಕ್ಕೆ ಬಂದರೆ ತಪ್ಪೇನು? ಅವರು ಸಿಎಂ ಆಗಬೇಕೆಂಬುದು ನನ್ನ ಆಸೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಅವರು ಸುದ್ದಿಗಾರರೊಂದಿಗೆ ಮಾತನ್ನಾಡಿದ್ದು “ನನ್ನ ಅಣ್ಣ ಸಿಎಂ ಆಗಬೇಕು ಎಂಬುದು ನನ್ನ ಆಸೆ” ಎಂದಿದ್ದಾರೆ.


















