ಬೆಂಗಳೂರು: ಪಕ್ಷದೊಳಗೆ ಪವರ್ ಶೇರಿಂಗ್ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಪವರ್ ಶೇರಿಂಗ್ ಬಗ್ಗೆ ಮಾತಾಗಿಲ್ಲ. ಒಪ್ಪಂದವು ಆಗಿಲ್ಲ. ಒಪ್ಪಂದ ಆಗಿರುವ ಬಗ್ಗೆ ನಮಗೆ ಮಾಹಿತಿಯಿಲ್ಲ. ಅಂತಹುದರಲ್ಲಿ ನಿಮಗೆಲ್ಲಿಂದು ಮಾಹಿತಿ ಬಂತು? ಸದ್ಯ ರಾಜ್ಯದಲ್ಲಿ ಸಿದ್ಧರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಅದು ಯಥಾವತ್ತಾಗಿ ಮುಂದುವರೆಯಲಿದೆ. ಇತ್ತ ಪವರ್ ಶೇರಿಂಗ್ ಬಗ್ಗೆ ಯಾವುದೇ ನಾಯಕರು ಮಾತನ್ನಾಡಿಲ್ಲ. ಪವರ್ ಶೇರಿಂಗ್, ಒಪ್ಪಂದದ ಬಗ್ಗೆ ನಮಗೆ ಗೊತ್ತಿಲ್ಲ. ನಿಮಗೆ ಹೇಗೆ ಗೊತ್ತಾಗುತ್ತದೆ? ಎಂದು ಪ್ರಶ್ನಿಸಿದ್ದಾರೆ.