ಬ್ಯಾಂಕಾಕ್: ಮಯನ್ಮಾರ್ (Myanmar) ಮತ್ತು ನೆರೆಯ ಥೈಲ್ಯಾಂಡ್ ನಲ್ಲಿ ಭೀಕರ ಭೂಕಂಪ ಸಂಭವಿಸಿದ್ದು ಸಾವನ್ನಪ್ಪಿದವರ ಸಂಖ್ಯೆ 1600ರ ಗಡಿ ದಾಟಿದೆ. ಗಾಯಾಳುಗಳ ಸಂಖ್ಯೆ ಕೂಡ ದ್ವಿಗುಣವಾಗಿದೆ.
ಶುಕ್ರವಾರ ಬೆಳಗ್ಗೆ 11:50ರ ವೇಳೆಗೆ ಸಂಭವಿಸಿದ ಭೂಕಂಪದಿಂದಾಗಿ ಆ ರಾಷ್ಟ್ರಗಳಲ್ಲಿ ದೊಡ್ಡ ಪ್ರಮಾಣದ ಹಾನಿಯಾಗಿದೆ. ಘಟನೆಯಲ್ಲಿ 1600ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. 3,400 ಜನ ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.
ಮ್ಯಾನ್ಮಾರ್‌ನಲ್ಲಿ ಮೊದಲ 7.7 ತೀವ್ರತೆಯ ಭೂಕಂಪ ಸಂಭವಿಸಿತ್ತು. ನಂತರ ಕೆಲವೇ ಗಂಟೆಗಳಲ್ಲಿ ಮೂರ್ನಾಲ್ಕು ಭಾರಿ ಭೂಕಂಪ ಸಂಭವಿಸಿದೆ. ಸರಣಿ ಭೂಕಂಪದ ಹಿನ್ನೆಲೆ ಗಗನ ಚುಂಬಿ ಕಟ್ಟಡಗಳು ನೆಲಕ್ಕಪ್ಪಳಿಸಿವೆ.
ಮ್ಯಾನ್ಮಾರ್ ನಲ್ಲೇ 1,640 ಜನ ಸಾವನ್ನಪ್ಪಿದ್ದು, ಬ್ಯಾಂಕಾಂಕ್‌ನಲ್ಲಿ ಇಲ್ಲಿಯವರೆಗೆ 10 ರಿಂದ 20 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಕುಸಿದ ಕಟ್ಟಡಗಳ ಅವಶೇಷಗಳ ಅಡಿ ನೂರಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.