ಮಯನ್ಮಾರ್ ನಲ್ಲಿ (Myanmar) ಭೀಕರ ಭೂಕಂಪಕ್ಕೆ ಇಡೀ ಜಗತ್ತೇ ಮಮ್ಮಲ ಮರಗುತ್ತಿದೆ. ಶುಕ್ರವಾರ ಈ ಘಟನೆ ನಡೆದಿದ್ದು, ಇಲ್ಲಿಯವರೆಗೆ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
ಸದ್ಯದ ಮಾಹಿತಿಯಂತೆ ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 694ಕ್ಕೆ ಏರಿಕೆಯಾಗಿದೆ. ಅಲ್ಲದೇ, ಘಟನೆಯಲ್ಲಿ 1,600ಕ್ಕೂ ಅಧಿಕ ಜನರು ಗಾಯಗೊಡಂದಿದ್ದಾರೆಂದು ವರದಿಯಾಗಿದೆ
ಅವಶೇಷಗಳ ಅಡಿ ನೂರಾರು ಮಂದಿ ಸಿಲುಕಿರುವ ಶಂಕೆ ಇದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.
ರಸ್ತೆಗಳಲ್ಲೇ ಚಿಕಿತ್ಸೆ:
ಭೀಕರ ಭೂಕಂಪಕ್ಕೆ ಇಡೀ ಮ್ಯಾನ್ಮರ್ ತತ್ತರಿಸಿ ಹೋಗಿದೆ. ಆಸ್ಪತ್ರೆಗಳು ಕೂಡ ಭೂಕಂಪದ ಹೊಡೆತಕ್ಕೆ ಸಿಲುಕಿ ಧಾರಾಶಾಹಿಯಾಗಿವೆ. ಈ ಹಿನ್ನೆಲೆಯಲ್ಲಿ ರಸ್ತೆ ಮಧ್ಯೆಯೇ ಗಾಯಾಳುಗಳಿಗೆ ಚಿಕಿತ್ಸೆ ನೀಡುವ ಪ್ರಸಂಗ ಎದುರಾಗಿದೆ. ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ನೊಂದ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಬಂದೊದಗಿವೆ. ಮ್ಯಾನ್ಮಾರ್‌ನ ನೈಪಿತಾವು ಸೇರಿ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಭಾರತದಿಂದ ನೆರವಿನ ಹಸ್ತ
ಭಾರತ ಕೂಡ ನೆರವಿನ ಹಸ್ತ ಚಾಚಿದೆ. ತಾತ್ಕಾಲಿಕ ಟೆಂಟ್‌ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ನೈರ್ಮಲ್ಯ ಕಿಟ್, ಸೋಲಾರ್ ಲೈಟ್, ಜನರೇಟರ್ ಸೆಟ್ ಹಾಗೂ ಔಷಧಗಳ ನೆರವನ್ನು ಭಾರತ ನೀಡಿದೆ. ಈಗಾಗಲೇ ಸುಮಾರು 15 ಟನ್ ಪರಿಹಾರ ಸಾಮಗ್ರಿಗಳನ್ನು ಭಾರತೀಯ ವಾಯುಸೇನೆಯ C-130-J ವಿಮಾನ ವಿಮಾನದಲ್ಲಿ ಮ್ಯಾನ್ಮಾರ್ ಗೆ ಸರಬರಾಜು ಮಾಡಲಾಗಿದೆ.