ಮೈಸೂರು : ಮೈಸೂರಿನಲ್ಲಿ ಕಳ್ಳರ ಹಾವಳಿ ದಿನೇದಿನೇ ಹೆಚ್ಚಾಗುತ್ತಿದೆ. ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಿದ ಘಟನೆ ಮೈಸೂರಿನ ಜಯದೇವ ನಗರದಲ್ಲಿ ನಡೆದಿದೆ.
ತಡರಾತ್ರಿ ಸುಮಾರು 2 ಗಂಟೆ ವೇಳೆ ಕಳ್ಳನೊಬ್ಬ ಮನೆ ಮುಂದೆ ನಿಲ್ಲಿಸಿದ್ದ ಆಕ್ಸಿಸ್ ಬೈಕ್‌ನ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾನೆ. ಬೈಕ್‌ನ ಶಬ್ದಕ್ಕೆ ಎಚ್ಚರಗೊಂಡ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಆಗಮಿಸಿದಾಗ, ಜನರನ್ನು ಕಂಡ ಕಳ್ಳ ಸ್ಥಳದಲ್ಲೇ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ.
ಈ ದೃಶ್ಯವು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಳ್ಳನ ಚಲನವಲನಗಳು ಸ್ಪಷ್ಟವಾಗಿ ದಾಖಲಾಗಿವೆ. ಈ ಘಟನೆ ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಅಕ್ರಮವಾಗಿ ಮಣ್ಣು ಸಾಗಿಸಿದ ಪ್ರಕರಣ | ಪೋಲೀಸ್ ಠಾಣೆಯಲ್ಲಿ CPIಗೆ ಧಮ್ಕಿ, ASI ವಿರುದ್ಧ FIR ದಾಖಲು



















