ಮೈಸೂರು : ವಿಶ್ವ ವಿಖ್ಯಾತ ಅಂಬಾವಿಲಾಸ ಅರಮನೆ ಬಳಿ ಉಂಟಾದ ಹೀಲಿಯಂ ಸಿಲಿಂಡರ್ ಸ್ಫೋಟದ ವೇಳೆ ಗಾಯಗೊಂಡಿದ್ದ ಮತ್ತೋರ್ವ ಮಹಿಳೆ ಲಕ್ಷ್ಮಿ ಕೂಡ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಬಲೂನ್ ಮಾರಾಟ ಮಾಡುತ್ತಿದ್ದ ವೇಳೆ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಸಂಭವಿಸಿದ ಸ್ಫೋಟದಿಂದ ಗಾಯಗೊಂಡಿದ್ದ ಲಕ್ಷ್ಮಿ ಅವರನ್ನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರು ಮೂಲದ ಲಕ್ಷ್ಮಿ ಅವರು ಕುಟುಂಬದ ಜೊತೆ ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಇದೀಗ ಸ್ಫೋಟದಲ್ಲಿ ದುರಂತ ಸಾವಿಗೀಡಾಗಿದ್ದಾರೆ.
ಅರಮನೆ ಮುಂಭಾಗ ಆಗಿದ್ದೇನು?
ಮೈಸೂರು ಅರಮನೆ ಬಳಿ ಸಂಭವಿಸಿದ್ದ ಹೀಲಿಯಂ ಸಿಲಿಂಡರ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿದೆ. ತೀವ್ರವಾಗಿ ಗಾಯಗೊಂಡಿದ್ದ ನಂಜನಗೂಡಿನ ಮಂಜುಳಾ, ಬೆಂಗಳೂರು ಮೂಲದ ಲಕ್ಷ್ಮಿ ಕೆ.ಆರ್ ಐಸಿಯುನಲ್ಲಿ ಸಾವನ್ನಪ್ಪಿದ್ದಾರೆ. ಗುರುವಾರ ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ಬಲೂನ್ ಮಾರುತ್ತಿದ್ದ ಸಲೀಂ (40) ಮೃತಪಟ್ಟಿದ್ದು, ಮೃತದೇಹ ಛಿದ್ರ-ಛಿದ್ರವಾಗಿದೆ. ಆರಂಭದಲ್ಲಿ ಮೃತ ಸಲೀಂ ಕೋಲ್ಕತ್ತಾದ ಮೂಲದವನು ಎನ್ನಲಾಗಿತ್ತು. ಆದರೆ, ಈಗ ಉತ್ತರ ಪ್ರದೇಶ ಮೂಲದವನು ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಮನೆಗೆ ಬೆಂಕಿ ಹಚ್ಚಲು ಯತ್ನ, ಕುಟುಂಬದವರಿಗೆ ಬೆದರಿಕೆ | ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಬಂಧನ



















