ಮೈಸೂರು : ಅರಮನೆಯ ಜಯಮಾರ್ತಾಂಡ ಗೇಟ್ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪಟ್ಟ ಮೂವರಿಗೆ, ತಲಾ 50 ಲಕ್ಷ ರೂ., ಪರಿಹಾರ ಕೊಡಬೇಕು ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಇಂದು ನಗರದ ಹಾರ್ಡಿಂಗ್ ವೃತ್ತದ ಬಳಿ ತಮಟೆ ಪ್ರತಿಭಟನೆ ನಡೆಸಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಅರಮನೆ ಜಯಮಾರ್ತಾಂಡ ಗೇಟ್ ಮುಂಭಾಗ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದಿದ್ದಾರೆ.
ಹಾಗೆಯೇ, ಮೃತಪಟ್ಟ ಮೂವರಿಗೆ ತಲಾ 50 ಲಕ್ಷ ರೂ., ಪರಿಹಾರ ಕೊಡಬೇಕು. ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳ ಮಾಹಿತಿ ಕಲೆಹಾಕಿ, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಚಿತ್ರದುರ್ಗ ಬಸ್ ದುರಂತ | ಐವರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ



















