ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.ಈ ನಡುವೆ ಸೆಪ್ಟೆಂಬರ್ 22ರಂದು ನಡೆಯಲಿರುವ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಿದೆ.
ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಸನದಲ್ಲಿರುವ ಬಾನು ಮುಷ್ತಾಕ್ ಅವರ ಮನೆಗೆ ತೆರಳಿ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ದಸರಾಗೆ ಬರುವಂತೆ ಅಧಿಕೃತ ಆಹ್ವಾನ ನೀಡಿದ್ದಾರೆ.
ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಆನೆ ವಿಗ್ರಹ ನೀಡಿ ಆಹ್ವಾನ ಪತ್ರಿಕೆಯನ್ನು ನೀಡಿದರು. ದಸರಾ ಆಹ್ವಾನವನ್ನು ಪ್ರೀತಿಯಿಂದ ಸ್ವೀಕರಿಸಿದ ಬಾನು ಮುಷ್ತಾಕ್ ತಾವು ಕಾರ್ಯಕ್ರಮಕ್ಕೆ ಬರುವುದಾಗಿ ತಿಳಿಸಿದ್ದಾರೆ.