ಮೈಸೂರು: ಮೈಸೂರು ದಸರಾ ಟಿಕೆಟ್ ಹಾಗೂ ಗೋಲ್ಡ್ ಕಾರ್ಡ್ ಗಳನ್ನು ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಪ್ರಕಟಣೆ ಹೊರಡಿಸಿದ್ದಾರೆ.
ಟಿಕೆಟ್ ಹಾಗೂ ಗೋಲ್ಡ್ ಕಾರ್ಡ್ ಗಳನ್ನು (Gold Card) ಸಾರ್ವಜನಿಕರ ಬಳಕೆಗೆ ಬಿಡುಗಡೆ ಮಾಡಲಾಗಿದ್ದು, ಈ ಕುರಿತು ದಸರಾ ಅಧಿಕೃತ ವೆಬ್ ಸೈಟ್‌ನಲ್ಲಿ ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ಸೆ.22 ರಿಂದ ಅ.2ರ ವರೆಗೆ ನಡೆಯಲಿರುವ ದಸರಾದಲ್ಲಿ ಗೋಲ್ಡ್ ಕಾರ್ಡ್ ಪಡೆದು ಎಲ್ಲ ಕಾರ್ಯಕ್ರಮಗಳನ್ನು ನೋಡಬಹುದಾಗಿದೆ. ಅರಮನೆ, ಜಂಬೂ ಸವಾರಿ, ಪಂಜಿನ ಕವಾಯತು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಹತ್ತಿರದಿಂದ ನೋಡಲು 6,500 ರೂ. ಮೌಲ್ಯದ ಗೋಲ್ಡ್ ಕಾರ್ಡ್, ಟಿಕೆಟ್ ಗಳನ್ನು ಬಿಡುಗಡೆ ಮಾಡಲಾಗಿದೆ.
ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಟಿಕೆಟ್ 3500 ಹಾಗೂ ಪಂಜಿನ ಕವಾಯತು ಟಿಕೆಟ್‌ಗೆ 1,500 ರೂ. ನಿಗದಿ ಮಾಡಲಾಗಿದೆ. ಸಾರ್ವಜನಿಕರು ಆನ್ಲೈನ್ ಮೂಲಕ ಟಿಕೆಟ್ ಗಳನ್ನು ಪಡೆಯಬಹುದಾಗಿದೆ. ಮೈಸೂರು ದಸರಾ ಅಧಿಕೃತ ಜಾಲತಾಣ https://mysoredasara.gov.in/ ಮೂಲಕ ಖರೀದಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.