ರಾಜ್ಯದಲ್ಲಿ ವಾಲ್ಮೀಕಿ ನಿಗಮ ಹಗರಣ, ಪೆಟ್ರೋಲ್ ಡೀಸೆಲ್ ದರ ಏರಿಕೆ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮುಗಿಬಿದ್ದಿವೆ. ಇದರ ಬೆನ್ನಲ್ಲಿಯೇ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಕೇಳಿ ಬಂದಿದೆ.
ಈ ಮಧ್ಯೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿವೆ. ಈಗ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಮೈಸೂರು ಮುಡಾ ಹಗರಣ ವಿಚಾರವಾಗಿ ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮತಾನಾಡಿರುವ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ಇದೊಂದು ಗಂಭೀರ ಪ್ರಕರಣವಾಗಿದೆ. ಇದನ್ನ ಸಿಬಿಐ ತನಿಖೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಪ್ರಕರಣದಲ್ಲಿ ಯಾವುದೇ ಪ್ರಭಾವಿಲ್ಲದಂತಹ ಸಂಸ್ಥೆಯಿಂದ ತನಿಖೆ ನಡೆಸುವ ಅಗತ್ಯವಿದೆ. ಈ ಪ್ರಕರಣವನ್ನು ನಮ್ಮ ಪಕ್ಷವು ಗಂಭೀರವಾಗಿ ಪರಿಗಣಿಸಿದೆ. ಹಗರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರಿಗೆ ನಮ್ಮ ಪಕ್ಷ ಹೋರಾಟ ಮುಂದುವರಿಸುತ್ತದೆ. ಈ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.