ಹಾಸನ: ತಾಲೂಕು ಕಚೇರಿ ಸಿಬ್ಬಂದಿ (Taluk Office Staff) ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನ ನಗರದ (Hassan City) ಚನ್ನಪಟ್ಟಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಹೊಳೆನರಸೀಪುರ ತಾಲೂಕು ಕಚೇರಿಯ ರೆಕಾರ್ಡ್ ರೂಂ ಸಿಬ್ಬಂದಿ (Record Room Staff) ಸತೀಶ್ (43) ಸಾವನ್ನಪ್ಪಿರುವ ವ್ಯಕ್ತಿ ಎನ್ನಲಾಗಿದೆ.
ಹೊಳೆನರಸೀಪುರ ತಾಲ್ಲೂಕು ಕಚೇರಿಯ ರೆಕಾರ್ಡ್ ರೂಂ ಸಿಬ್ಬಂದಿ ಹದಿನೈದು ವರ್ಷಗಳ ಹಿಂದೆ ಹಾಸನದ ವಿದ್ಯಾ ಎಂಬುವವರ ಜೊತೆ ಮದುವೆಯಾಗಿದ್ದರು. ಆದರೆ, ಇಬ್ಬರ ಮಧ್ಯೆ ಹೊಂದಾಣಿಕೆ ಇರಲಿಲ್ಲ. ರಾಜೀ ಸಂಧಾನ ಕೂಡ ನಡೆದಿದ್ದವು. ನಿನ್ನೆ (ಏ.28) ಬೆಳಗ್ಗೆ ಮನೆಯಲ್ಲೇ ಸತೀಶ್ ಮೃತಪಟ್ಟಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಪತ್ನಿ ಹಾಗೂ ಅವರ ಕುಟುಂಬಸ್ಥರು ಕೊಲೆ ಮಾಡಿದ್ದಾರೆಂದು ಸತೀಶ್ ಕುಟುಂಬಸ್ಥರು ಆರೋಪಿಸಿದ್ದಾರೆ. ಸತೀಶ್ ತಲೆಗೆ ಪೆಟ್ಟಾಗಿರುವುದು ಮೇಲ್ನೋಟಕ್ಕೆ ಕಂದುಬಂದಿರುವುದು ಇದಕ್ಕೆ ಪುಷ್ಟಿ ನೀಡಿದಂತಿದೆ. ಸ್ಥಳಕ್ಕೆ ಹಾಸನ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.