ಬೆಂಗಳೂರು : ನೀವೇನಾದರೂ ಮೈಸೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಒಳ್ಳೆಯ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ. ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 91 ಹುದ್ದೆಗಳ ನೇಮಕಾತಿಗಾಗಿ (Mysuru District Court Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ನೇಮಕಾತಿಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ, ಮೈಸೂರು
ಒಟ್ಟು ಹುದ್ದೆಗಳು: 91
ಹುದ್ದೆಗಳ ಹೆಸರು: ಸ್ಟೆನೊಗ್ರಾಫರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 31
75 ಪ್ಯೂನ್, 11 ಪ್ರೊಸೆಸ್ ಸರ್ವರ್, 3 ಕಾಪಿಯಿಸ್ಟ್ ಹಾಗೂ 4 ಸ್ಟೆನೊಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ ಹಾಗೂ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 83,700 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್ ಕೆಟಗರಿಯವರಿಗೆ 200 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ mysuru.dcourts.gov.inವೆಬ್ ಸೈಟ್ ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
- ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
- ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
- ಫೀಸ್ ತುಂಬುವ ಮೂಲಕ ಅರ್ಜಿ ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ಗುಜರಾತ್ ಟೈಟಾನ್ಸ್ ಮಧ್ಯಮ ಕ್ರಮಾಂಕದ ವೈಫಲ್ಯದ ಬಗ್ಗೆ ಮೌನ ಮುರಿದ ರಶೀದ್ ಖಾನ್!



















