ಮೈಸೂರು : ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಎರಡು ದಿನಗಳ ಹಿಂದೆ ನಡೆದಿರುವ ಈ ಪ್ರಕರಣದಲ್ಲಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅತ್ಯಾಚಾರಕ್ಕೆ ಒಳಗಾದ ಯುವತಿಯನ್ನು ಪಶ್ಚಿಮ ಬಂಗಾಳ ಮೂಲದ ಕಲ್ಪನಾ ಮುಂಡಾ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳನ್ನು ಟಿ. ನರಸೀಪುರ ಪಟ್ಟಣದ ನಿವಾಸಿಗಳಾದ ಕಿರಣ್, ಕಿಶೋರ್ ಮತ್ತು ರಿಯಾನ್ ಎಂದು ತಿಳಿದುಬಂದಿದೆ.
ಆರೋಪಿಗಳು ಟಿ. ನರಸೀಪುರದ ಖಾಸಗಿ ಬಸ್ ನಿಲ್ದಾಣದ ಬಳಿ ಯುವತಿಯನ್ನು ಅಪಹರಿಸಿ, ಬಳಿಕ ಮೂಗೂರು ಗ್ರಾಮದ ಲಾಡ್ಜ್‌ಗೆ ಕರೆದೊಯ್ದು ಮೂವರೂ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪ್ರಕರಣ ದಾಖಲಿಸಿಕೊಂಡ ಟಿ. ನರಸೀಪುರ ಪೊಲೀಸರು ತಕ್ಷಣ ತನಿಖೆ ಆರಂಭಿಸಿ, ಘಟನೆ ನಡೆದ 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘಟನಾ ಸಂಬಂಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಶಾಲಾ ಮಕ್ಕಳ ‘ಶೂ’ ವಿತರಣೆಯಲ್ಲೂ ಲೂಟಿ? ಶಿಕ್ಷಣ ಇಲಾಖೆಯಲ್ಲಿ ನಡೀತಾ ಮಹಾ ಭ್ರಷ್ಟಾಚಾರ!?



















