ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ (NAAC Recruitment 2026) ಹೊರಡಿಸಲಾಗಿದೆ. ಒಂದು ಪ್ರಾಜೆಕ್ಟ್ ಅಸಿಸ್ಟಂಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿ (NAAC)
ಹುದ್ದೆ ಹೆಸರು: ಪ್ರಾಜೆಕ್ಟ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 1
ಅರ್ಜಿ ಸಲ್ಲಿಕೆ ವಿಧಾನ: ಇ-ಮೇಲ್
ಸಂದರ್ಶನದ ದಿನಾಂಕ: ಸೆಪ್ಟೆಂಬರ್ 9
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಲಿಟರೇಚರ್ ಸರ್ವೆ, ಡೇಟಾ ಅನಾಲಿಸಿಸ್, ಎಂಎಸ್ ಆಫೀಸ್ ಗೊತ್ತಿರಬೇಕು. ಅಭ್ಯರ್ಥಿಗಳನ್ನು 10 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು naac.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿದ ಬಳಿಕ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು hr.staff@naac.org.in ಗೆ ಇ-ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



















