ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನಲ್ಲಿ (NABARD Recruitment 2026) ಖಾಲಿ ಇರುವ 44 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 44 ಯುವ ವೃತ್ತಿಪರ ಅಥವಾ ಯಂಗ್ ಪ್ರೊಫೇಷನಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ ಹೆಸರು: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (NABARD)
ಖಾಲಿ ಹುದ್ದೆಗಳ ಸಂಖ್ಯೆ: 44
ಹುದ್ದೆಯ ಸ್ಥಳ: ದೇಶಾದ್ಯಂತ
ಹುದ್ದೆಯ ಹೆಸರು: ಯಂಗ್ ಪ್ರೊಫೇಷನಲ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 12
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎ, ಬಿಬಿಎ, ಬಿಬಿಎಂ, ಬಿಇ, ಬಿಟೆಕ್, ಎಂ ಎಡ್, ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು nabard.org ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 70 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ದೇಶದ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಉತ್ತೇಜಿಸುವುದು, ಕೃಷಿ, ಸಣ್ಣ ಕೈಗಾರಿಕೆಗಳು, ಗ್ರಾಮ ಕೈಗಾರಿಕೆಗಳು ಮತ್ತು ಕರಕುಶಲ ಕ್ಷೇತ್ರಗಳಿಗೆ ಸಾಲ ನೀಡುವುದು, ಗ್ರಾಮೀಣ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಗ್ರಾಮೀಣ ಮೂಲಸೌಕರ್ಯ (ರಸ್ತೆ, ವಿದ್ಯುತ್, ನೀರು) ಅಭಿವೃದ್ಧಿಗೆ ಬೆಂಬಲ ನೀಡುವುದು ನಬಾರ್ಡ್ ಉದ್ದೇಶವಾಗಿದೆ. ರೈತರು, ಕುಶಲಕರ್ಮಿಗಳು ಮತ್ತು ಗ್ರಾಮೀಣ ಉದ್ಯಮಿಗಳಿಗೆ ಆರ್ಥಿಕ ನೆರವು ನೀಡಿ, ಉದ್ಯೋಗ ಸೃಷ್ಟಿಸಿ, ಆದಾಯ ಹೆಚ್ಚಿಸುವ ಮೂಲಕ ಗ್ರಾಮೀಣಾಭಿವೃದ್ಧಿಗೆ ಕೊಡುಗೆ ನೀಡುತ್ತದೆ.
ಇದನ್ನೂ ಓದಿ: ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ 71 ಹುದ್ದೆಗಳ ನೇಮಕಾತಿ : 2.10 ಲಕ್ಷ ರೂಪಾಯಿ ಸಂಬಳ



















