ಬೆಂಗಳೂರು: ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಖಾಸಗಿ ಸಂಸ್ಥೆಯಾದರೂ ಒಂದು ಲಕ್ಷ ರೂ.ಗಿಂತ ಹೆಚ್ಚಿನ ಸಂಬಳ ನೀಡುವ ಕಾರಣ ಅರ್ಜಿ ಸಲ್ಲಿಸುವ ಮೂಲಕ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಗಸ್ಟ್ 26 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ (NABCONS)
ಹುದ್ದೆಗಳ ಹೆಸರು: ಚೀಫ್ ಟೆಕ್ನಿಕಲ್ ಸೂಪರ್ ವೈಸರ್, ಜೂನಿಯರ್ ಟೆಕ್ನಿಕಲ್ ಸೂಪರ್ ವೈಸರ್
ಒಟ್ಟು ಹುದ್ದೆಗಳು: 63
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 26
ದೇಶದ ಯಾವುದೇ ಭಾಗದಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಹಾಗೂ ಮುಂಬಯಿಯಲ್ಲಿರುವ ಕಚೇರಿಯಲ್ಲಿ ಕೆಲಸ ಮಾಡಲು ಬಯಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 45 ಸಾವಿರ ರೂಪಾಯಿಯಿಂದ 1.15 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ.
ಯಾವ ಹುದ್ದೆ ಎಷ್ಟು ಖಾಲಿ?
ಜೂನಿಯರ್ ಟೆಕ್ನಿಕಲ್ ಸೂಪರ್ ವೈಸರ್ (Civil) 34
ಟೆಕ್ನಿಕಲ್ ಸೂಪರ್ ವೈಸರ್ (Electrical) 27
ಚೀಫ್ ಟೆಕ್ನಿಕಲ್ ಸೂಪರ್ ವೈಸರ್ (Civil) 1
ಚೀಫ್ ಟೆಕ್ನಿಕಲ್ ಸೂಪರ್ ವೈಸರ್ (Electrical) 1
ಒಟ್ಟು 63
ಕನಿಷ್ಠ 35 ವರ್ಷದಿಂದ ಗರಿಷ್ಠ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು https://www.nabard.org/nabcons.aspx ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಶಾರ್ಟ್ ಲಿಸ್ಟಿಂಗ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.