ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (NABARD) ಅಂಗಸಂಸ್ಥೆಯಾಗಿರುವ ನ್ಯಾಬ್ ಫಿನ್ಸ್ ಸಂಸ್ಥೆಯಲ್ಲಿ (NABFINS Recruitment 2026) ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಟೆಲಿ ಕಾಲರ್ ಹಾಗೂ ಕಸ್ಟಮರ್ ಸರ್ವಿಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬೆಂಗಳೂರಿನಲ್ಲೇ ಕೇಂದ್ರ ಕಚೇರಿ ಹೊಂದಿರುವುದರಿಂದ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಇದರಿಂದ ಅನುಕೂಲವಾಗಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ ಹೆಸರು: ನ್ಯಾಬ್ ಫಿನ್ಸ್
ಖಾಲಿ ಹುದ್ದೆಗಳ ಸಂಖ್ಯೆ: ವಿವಿಧ
ಹುದ್ದೆಯ ಸ್ಥಳ: ಬೆಂಗಳೂರು
ಹುದ್ದೆಯ ಹೆಸರು: ಟೆಲಿ ಕಾಲರ್ ಹಾಗೂ ಕಸ್ಟಮರ್ ಸರ್ವಿಸ್ ಆಫೀಸರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 23
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
• ಮೊದಲಿಗೆ nabfins.org ವೆಬ್ ಸೈಟ್ ಗೆ ಭೇಟಿ ನೀಡಬೇಕು
• ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
• ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
• ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು
ಸಂಸ್ಥೆಯ ಉದ್ದೇಶ
ಕರ್ನಾಟಕ ಸರ್ಕಾರ, ಕೆನರಾ ಬ್ಯಾಂಕ್ ಸೇರಿ ಕೆಲವು ಬ್ಯಾಂಕುಗಳ ಸಹಯೋಗದೊಂದಿಗೆ ನ್ಯಾಬ್ ಫಿನ್ಸ್ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಸಣ್ಣ ರೈತರು, ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ಗ್ರಾಮೀಣ ಉದ್ಯಮಿಗಳಿಗೆ ಹಣಕಾಸಿನ ನೆರವು ನೀಡುವುದು ಇದರ ಉದ್ದೇಶವಾಗಿದೆ.
ಇದನ್ನೂ ಓದಿ : ಸಂಚಲನ ಸೃಷ್ಟಿಸಿದ ನೆತನ್ಯಾಹು ‘ಕಾಫಿ ವಿಡಿಯೋ’.. ಇದು ಅಸಲಿಯೋ? ಡೀಪ್‌ಫೇಕೋ?



















