ಬೆಂಗಳೂರು: ಬೆಂಗಳೂರಿನಲ್ಲೇ ಉದ್ಯೋಗ ಹುಡುಕುತ್ತಿರುವವರಿಗೆ ಶುಭ ಸಮಾಚಾರ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (NABARD) ಅಂಗಸಂಸ್ಥೆಯಾಗಿರುವ ನ್ಯಾಬ್ ಫಿನ್ಸ್ ಸಂಸ್ಥೆಯಲ್ಲಿ (NABFINS Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ ಹೆಸರು: ನ್ಯಾಬ್ ಫಿನ್ಸ್
ಖಾಲಿ ಹುದ್ದೆಗಳ ಸಂಖ್ಯೆ: ವಿವಿಧ
ಹುದ್ದೆಯ ಸ್ಥಳ: ಬೆಂಗಳೂರು
ಹುದ್ದೆಯ ಹೆಸರು: ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 15
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪಾಸಾಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕನಿಷ್ಠ 2 ವರ್ಷಗಳ ಕಾರ್ಯಾನುಭವ ಇರುವವರಿಗೆ ಆದ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ nabfins.org ವೆಬ್ ಸೈಟ್ ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
- ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
- ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಗಮನಿಸಿ: ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು swathi.s@nabfins.org ಅಥವಾ to careers@nabfins.org ಗೆ ಮೇಲ್ ಕೂಡ ಮಾಡಬಹುದು.
ಇದನ್ನೂ ಓದಿ :ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!


















