ಬೆಂಗಳೂರು : ರಾಜ್ಯದಲ್ಲೇ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (NABARD) ಅಂಗಸಂಸ್ಥೆಯಾಗಿರುವ ನ್ಯಾಬ್ ಫಿನ್ಸ್ ಸಂಸ್ಥೆಯಲ್ಲಿ (NABFINS Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಖಾಲಿ ಇರುವ ಕಸ್ಟಮರ್ ಸರ್ವಿಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ ಹೆಸರು: ನ್ಯಾಬ್ ಫಿನ್ಸ್
ಖಾಲಿ ಹುದ್ದೆಗಳ ಸಂಖ್ಯೆ: ವಿವಿಧ
ಹುದ್ದೆಯ ಸ್ಥಳ: ಕರ್ನಾಟಕ ಸೇರಿ ದೇಶದ ಹಲವೆಡೆ
ಹುದ್ದೆಯ ಹೆಸರು: ಕಸ್ಟಮರ್ ಸರ್ವಿಸ್ ಆಫೀಸರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 10
ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nabfins.org ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ಇಂಗ್ಲೆಂಡ್ ತಂಡದ ತರಬೇತುದಾರನಾಗುವ ಆಸೆ ವ್ಯಕ್ತಪಡಿಸಿದ ಬೆನ್ ಸ್ಟೋಕ್ಸ್!


















