ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ʼಮುಖ್ಯಮಂತ್ರಿʼ ಹುದ್ದೆಯ ಶೀತಲ ಸಮರ ತೀವ್ರಗೊಂಡಿದೆ. ಈ ʻಪವರ್ ಫೈಟ್ʼ ನಡುವೆ ಇದೀಗ ಕಾಶಿಯಿಂದ ಬಂದ ನಾಗ ಸಾಧುಗಳ ಆಶೀರ್ವಾದ ಡಿಸಿಎಂ ಡಿಕೆಶಿ ಅವರಿಗೆ ದೊರೆತಿದೆ.

ಹೌದು.. ಇಂದು ಬೆಳ್ಳಂಬೆಳಗ್ಗೆ ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಬಂದ ನಾಗ ಸಾಧುಗಳು, ಡಿಕೆಶಿ ತಲೆ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿದ್ದಾರೆ.
ಈ ಬಗ್ಗೆ ಪ್ರತಕ್ರಿಯಿಸಿದ ಸಾಧುಗಳು, ಶಿವಕುಮಾರ್ ಸಿಎಂ ಆಗಲೆಂದು ಆಶೀರ್ವಾದ ಮಾಡಿದ್ದೇನೆ. ಅವ್ರು ಸಿಎಂ ಆಗ್ತಾರೆ ಎಂದು ಹೇಳಿ ತೆರಳಿದ್ದಾರೆ.
ಇದನ್ನೂ ಓದಿ : ತಮಿಳುನಾಡಿನಲ್ಲಿ ಖಾಸಗಿ ಬಸ್‌ಗಳ ನಡುವೆ ಭೀಕರ ಅಪಘಾತ | 6 ಮಂದಿ ಸಾವು, 28 ಮಂದಿ ಗಾಯ!



















