ಬೆಂಗಳೂರು : ಯಲಹಂಕ ಬಳಿಯ ಕೋಗಿಲು ಲೇಔಟ್‌ನ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ತಲೆಯೆತ್ತಿದ್ದ ಶೆಡ್‌ಗಳನ್ನು ತೆರವುಗೊಳಿಸಿರುವುದರಿಂದ 200ಕ್ಕೂ ಹೆಚ್ಚು ಕುಂಟುಬಗಳು ಬೀದಿಗೆ ಬಂದಿವೆ. ಹೀಗಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಇಂದು ಖುದ್ದು ಸ್ಥಳಕ್ಕೆ ಭೇಟಿ ನೀಡಿ ನಿರಾಶ್ರಿತರ ಸಮಸ್ಯೆಯನ್ನು ಆಲಿಸಿದ್ದು, ಅಧಿಕಾರಿಗಳಿಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಕೋಗಿಲು ಲೇಔಟ್‌ಗೆ ಭೇಟಿ ನೀಡಿದ ನಾಗಲಕ್ಷ್ಮೀ ಚೌಧರಿ ಅವರು, ಮಹಿಳೆಯರಿಗೆ ನೀಡಿರುವ ಭದ್ರತೆ, ಸುರಕ್ಷತೆ, ಪುನರ್ವಸತಿ ಹಾಗೂ ಇತರ ಮೂಲಭೂತ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಹಾಗೆಯೇ ಪೊಲೀಸ್ ಇಲಾಖೆಯವರಿಗೆ ಮಹಿಳೆಯರು ಮತ್ತು ಮಕ್ಕಳು ಹಾಗೂ ಹಿರಿಯ ನಾಗರಿಕರ ರಕ್ಷಣೆಯ ಕುರಿತು, ಆರೋಗ್ಯ ಇಲಾಖೆಯವರಿಗೆ ಗರ್ಭಿಣಿ ಮಹಿಳೆಯರು ಮತ್ತು ಬಾಣಂತಿ ಹಾಗೂ ಹಿರಿಯ ನಾಗರಿಕರ ಆರೋಗ್ಯ ಕುರಿತು, ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರಿಗೆ ಅಲ್ಲಿನ ಮಹಿಳೆಯರ ಸಭೆ ಮಾಡಿ ಅಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ವರದಿ ಕಳುಹಿಸಲು ಹಾಗೂ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಕ್ರಮ ವಹಿಸಲು ತಿಳಿಸಿದ್ದಾರೆ.
ಇನ್ನು ನಿರಾಶ್ರಿತರಿಗೆ ಶಾಶ್ವತ ಪರಿಹಾರ ವ್ಯವಸ್ಥೆ ಆಗುವವವರೆಗೆ ಊಟ, ವಸತಿ, ಕುಡಿಯುವ ನೀರು, ವಿದ್ಯುತ್ ಮುಂತಾದ ಮೂಲ ಸೌಲಭ್ಯಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ : ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಾಟ್ಸಾಪ್ ಹ್ಯಾಕ್ | ಹಣಕ್ಕೆ ಬೇಡಿಕೆ ಇಟ್ಟ ಸೈಬರ್ ವಂಚಕರು!



















