ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 1 ಸೀನಿಯರ್ ರಿಸರ್ಚ್ ಫೆಲೋ ಹಾಗೂ 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL)
ಹುದ್ದೆಯ ಹೆಸರು: SRF, JRF
ಒಟ್ಟು ಹುದ್ದೆಗಳು: 2
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 16
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಎಸ್ಸಿ ಕೋರ್ಸ್ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 32 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 42 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nal.res.in ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Sr. Controller of Administration National Aerospace Laboratories P.B.No.1779, HAL Airport Road Kodihalli, Bengaluru – 560 017.
ಇದನ್ನೂ ಓದಿ ;ಕೆನರಾ ಬ್ಯಾಂಕಿನಲ್ಲಿ 3,500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!


















