ಬೆಂಗಳೂರು : ನೀವೇನಾದರೂ ಐಟಿಐ ಕೋರ್ಸ್ ಮುಗಿಸಿ, ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 6 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL)
ಹುದ್ದೆಯ ಹೆಸರು: ಮಲ್ಟಿ ಟಾಸ್ಕಿಂಗ್ ಸ್ಟಾಫ್
ಒಟ್ಟು ಹುದ್ದೆಗಳು: 6
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 21
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಇದೆ. ಜನರಲ್, ಒಬಿಸಿಯವರಿಗೆ 500 ರೂ. ಅರ್ಜಿ ಶುಲ್ಕವಿದೆ. ಉಳಿದವರಿಗೆ ವಿನಾಯಿತಿ ನೀಡಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 56 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಕೊನೆಗೆ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nal.res.in ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Director, CSIR–National Aerospace Laboratories (CSIR–NAL), Post Bag No. 1779, HAL Airport Road, Kodihalli, Bengaluru – 560017.
ಇದನ್ನೂ ಓದಿ : ಪಿಜಿ, ಹೋಟೆಲ್, ರೆಸ್ಟೋರೆಂಟ್‌ಗಳ ಮೇಲೆ ಪಾಲಿಕೆ ಕಣ್ಣು ; ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!



















