ಬೆಂಗಳೂರು: ನೀವೇನಾದರೂ ಐಟಿಐ, ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿ, ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 33 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಹೀಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL)
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್, ಅಪ್ರೆಂಟಿಸ್ ಟ್ರೈನಿ
ಒಟ್ಟು ಹುದ್ದೆಗಳು: 33
ಸಂದರ್ಶನದ ದಿನಾಂಕ: ಮಾರ್ಚ್ 12
ಉದ್ಯೋಗ ಸ್ಥಳ: ಬೆಂಗಳೂರು
ಪ್ರಾಜೆಕ್ಟ್ ಅಸೋಸಿಯೇಟ್, ಟರ್ನರ್, ಫಿಟ್ಟರ್, ಎಲೆಕ್ಟ್ರಿಶಿಯನ್, ಮೆಷಿನಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಐಟಿಐ, ಬಿ.ಇ, ಬಿ.ಟೆಕ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 42 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವವರು ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nal.res.inಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು.
ಅಗತ್ಯ ದಾಖಲೆಗಳೊಂದಿಗೆ CSIR-NAL, RAB Meeting Complex, National Aerospace Laboratories, Adjacent to SBI, NAL Branch, Kodihalli, Bengaluru – 560017 ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಒಂದೊಂದು ಹುದ್ದೆಗೆ ಒಂದೊಂದು ದಿನಾಂಕದಂದು ಸಂದರ್ಶನ ಇರುತ್ತದೆ. ಹಾಗಾಗಿ, ಅಧಿಸೂಚನೆ ಓದಿಕೊಂಡು ಸಂದರ್ಶನಕ್ಕೆ ಸಿದ್ಧತೆ ನಡೆಸಬಹುದು.
ಇದನ್ನೂ ಓದಿ: ಸುಪ್ರೀಂ ಕೋರ್ಟ್ ನಲ್ಲಿ 22 ಹುದ್ದೆಗಳ ನೇಮಕಾತಿ | 78 ಸಾವಿರ ರೂ. ಸಂಬಳ



















