ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL Recruitment 2026) ಸಂಸ್ಥೆಯಲ್ಲಿ ಖಾಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದರೊಂದಿಗೆ ಕೇಂದ್ರ ಸರ್ಕಾರದ ಹುದ್ದೆಗಳನ್ನು ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಂತಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL)
ಹುದ್ದೆಯ ಹೆಸರು: ಪ್ರಾಜೆಕ್ಟ್ ಸ್ಟಾಫ್
ಒಟ್ಟು ಹುದ್ದೆಗಳು: ವಿವಿಧ
ಸಂದರ್ಶನದ ದಿನಾಂಕ: ಆಗಸ್ಟ್ 10
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಏರೋಸ್ಪೇಸ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಂದರ್ಶನವು ಆಗಸ್ಟ್ 10ರಿಂದ ಆರಂಭವಾಗಲಿದ್ದು, ಆಗಸ್ಟ್ 25ರವರೆಗೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 42 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವವರು ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nal.res.in ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ನಡೆಯುವ ಸ್ಥಳ
CSIR-National Aerospace Laboratories PB No-1779,HAL Airport Road, Kodihalli, Bengaluru-560017.


















