ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಅಲ್ಯುಮಿನಿಯಂ ಕಂಪನಿಯಲ್ಲಿ (NALCO Recruitment 2026) ಖಾಲಿ ಇರುವ 48 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. 48 ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗೆ ಮುಂದೆ ಓದಿ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್
ಹುದ್ದೆಗಳ ಹೆಸರು: ಮ್ಯಾನೇಜರ್
ಒಟ್ಟು ಹುದ್ದೆಗಳು: 48
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 2
ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕೆಮಿಕಲ್ ಹಾಗೂ ಇ ಆ್ಯಂಡ್ ಐ ವಿಭಾಗದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಗರಿಷ್ಠ 38 ವರ್ಷದೊಳಗಿನವರು ಆಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 67 ಸಾವಿರ ರೂಪಾಯಿಯಿಂದ 2.08 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವವರು ಮೊದಲಿಗೆ nalcoindia.com ಭೇಟಿ ನೀಡಿ ಅಧಿಸೂಚನೆ ಓದಬೇಕು. ಬಳಿಕ ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು.
ಇದನ್ನೂ ಓದಿ : ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ


















