ಬೆಂಗಳೂರು: ಕೊನೆಗೂ ರಾಜ್ಯ ವಿಧಾನ ಪರಿಷತ್‌ನ ನಾಲ್ಕು ಖಾಲಿ ಸ್ಥಾನಗಳಿಗೆ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಆದರೆ, ಈ ಹಿಂದೆ ಅಂತಿಮ ಪಟ್ಟಿಯಲ್ಲಿ ಹೆಸರು ಪಡೆದಿದ್ದ ಇಬ್ಬರ ಹೆಸರನ್ನು ಕೈ ಬಿಡಲಾಗಿದೆ.
ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ಅನಿವಾಸಿ ಭಾರತೀಯ ಕೋಶದ (ಎನ್‌ಆರ್‌ಐ) ಉಪಾಧ್ಯಕ್ಷೆ ಆರತಿ ಕೃಷ್ಣ, ಮೈಸೂರು ಮೂಲದ ಶಿವಕುಮಾರ್, ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಮುಖಂಡ ಜಕ್ಕಪ್ಪ ಅವರನ್ನು ನಾಮನಿರ್ದೇಶನ ಮಾಡಲು ತೀರ್ಮಾನಿಸಲಾಗಿದೆ. ಆದರೆ, ಅಧಿಕೃತ ಘೋಷಣೆ ಬಾಕಿ ಇದೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮೂಲಕ ಸಂಭಾವ್ಯರ ಪಟ್ಟಿ ಪಡೆದುಕೊಂಡಿರುವ ಎಐಸಿಸಿ ಅಂತಿಮ ಘೋಷಣೆ ಮಾಡುವ ಸಾಧ್ಯತೆ ಇದೆ. ಹಿಂದೆ ಮಾಡಿದ ಪಟ್ಟಿಯಲ್ಲಿ ದಿನೇಶ್ ಮಟ್ಟು ಅವರ ಹೆಸರಿಗೆ ತೀವ್ರ ವಿರೋಧಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಅವರ ಹೆಸರು ಕೈ ಬಿಡಲಾಗಿದೆ. ಅವರೊಂದಿಗೆ ಸಾಗರ್ ಅವರನ್ನು ಕೂಡ ಕೈ ಬಿಡಲಾಗಿದೆ.



















