ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಒಂದಾಗಿ ದೆಹಲಿಗೆ ತೆರಳಿದ್ದು, ನಾಯಕರ ಮುಂದೆ ಒಟ್ಟಾಗಿ ಕುಳಿತು 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ.
ಗುರುವಾರ ಸಂಜೆ ಕರ್ನಾಟಕ ಭವನ ಭವನದಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್, ಒಂದೇ ಕಾರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮನೆಗೆ ಆಗಮಿಸಿದ್ದರು. ಅಲ್ಲಿ ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಕ್ಕೆ ಒಪ್ಪಿಗೆ ಪಡೆದುಕೊಂಡಿದ್ದಾರೆ. ಉಪಾಧ್ಯಕ್ಷರು, ಸದಸ್ಯರ ನೇಮಕ ಪ್ರಕ್ರಿಯೆ ಮುಂದಿನ ಹಂತದಲ್ಲಿ ಸಭೆ ಮಾಡಿ ತೀರ್ಮಾನ ಮಾಡಲು ನಾಯಕರು ನಿರ್ಧರಿಸಿದ್ದಾರೆ.
ಸಿಎಂ, ಡಿಸಿಎಂ ಬೆಂಗಳೂರಿಗೆ ಮರಳುತ್ತಿದ್ದಂತೆ 20 ಅಧ್ಯಕ್ಷರ ಪಟ್ಟಿ ಘೋಷಣೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ 4 ಎಂಎಲ್ಸಿ ಸ್ಥಾನಗಳ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲು ಬಿಡಲಾಗಿದೆ.



















