ನವ ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ರವಿವಾರ) ಸಂಜೆ 5 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ಮೋದಿ ಯಾವ ವಿಚಾರ ಮಾತನಾಡಲಿದ್ದಾರೆ ಎನ್ನುವುದು ಸ್ಪಷ್ಟವಾಗಿಲ್ಲ.
ಆದರೆ, ನಾಳೆಯಿಂದ ದೇಶಾದ್ಯಂತ ಜಿಎಸ್‌ಟಿ ಕಡಿತ ಜಾರಿಗೆ ಬರಲಿದೆ. ಇದಕ್ಕೂ ಒಂದು ದಿನ ಮುಂಚಿತವಾಗಿಯೇ ಪ್ರಧಾನಿ ಮೋದಿ ಜಿಎಸ್‌ಟಿ ಕಡಿತದ ಬಗ್ಗೆ ಮಾತನಾಡುವ ಸಾಧ್ಯತೆ ಇದೆ.
ಎಚ್-1ಬಿ ವೀಸಾಗೆ ಒಂದು ಲಕ್ಷ ಡಾಲರ್ ಶುಲ್ಕವನ್ನು ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಬಗ್ಗೆ ಕೂಡ ಪ್ರಧಾನಿ ಭಾಷಣದಲ್ಲಿ ಉಲ್ಲೇಖಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.