ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು(ಭಾನುವಾರ) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮೆಟ್ರೋ ಹಸಿರು ಮಾರ್ಗದ ನಾಲ್ಕು ನಿಲ್ದಾಣಗಳು ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುವುದಿಲ್ಲವೆಂದು ಬಿ.ಎಂ.ಆರ್.ಸಿ.ಎಲ್ ಹೇಳಿದೆ.
ಈ ಸಂಬಂಧಿಸಿದಂತೆ ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿದ್ದು, ಲಾಲ್ ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ, ಆರ್ ವಿ ರಸ್ತೆ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಮುಚ್ಚಲಾಗುತ್ತದೆ ಎಂದು ತಿಳಿಸಿದೆ.
ಭದ್ರತೆಯ ದೃಷ್ಟಿಯಿಂದ ಹಾಗೂ ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ಕೋರಿಕೆಯ ಮೇರೆಗೆ ಇಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಲಾಲ್‌ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ ಮತ್ತು ಆರ್.ವಿ. ರಸ್ತೆ ಮೆಟ್ರೊ ನಿಲ್ದಾಣಗಳನ್ನು ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ಹೇಳಿದೆ.
ನಮ್ಮ ಮೆಟ್ರೊ ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆ ಗಮನಿಸಿ ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಲು ಸೂಚಿಸಲಾಗಿದೆ. ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಹಾಗೂ ಸಾರ್ವಜನಿಕರ ಸಹಕಾರವನ್ನು ಕೋರುತ್ತೇವೆ ಎಂದು ತಿಳಿಸಿದೆ.


















