ಮೈಸೂರು: ನಂಜನಗೂಡಿನಲ್ಲಿ ಅದ್ದೂರಿಯಾಗಿ ತೆಪ್ಪೋತ್ಸವ ನಡೆದಿದೆ.
ಕಪಿಲಾ ನದಿಯಲ್ಲಿ ತೆಪ್ಪದಾರತಿ ನಡೆದಿದ್ದು, ಲಕ್ಷಾಂತರ ಭಕ್ತರು ಭಾಗಿಯಾಗಿದ್ದರು. ದೊಡ್ಡ ಜಾತ್ರೆಯಾಗಿರುವ ಹಿನ್ನೆಲೆಯಲ್ಲಿ ತೆಪ್ಪೋತ್ಸವ ವೀಕ್ಷಿಸಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಈ ವೇಳೆ ನಂಜುಡೇಶ್ವರನ ಕೃಪೆಗೆ ಪಾತ್ರರಾದರು.
ತೆಪ್ಪೋತ್ಸವದ ಹಿನ್ನೆಲೆಯಲ್ಲಿ ಕಪಿಲಾ ನದಿಯ ಸುತ್ತಲೂ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ತೆಪ್ಪೋತ್ಸವದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಭಕ್ತರು ಸಂಭ್ರಮಿಸಿದರು.